ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ.
ಆಸ್ಟ್ರೇಲಿಯಾವನ್ನು 474 ರನ್ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ಎರಡನೇ ದಿನದಾಟದಂತ್ಯಕ್ಕೆ ಪ್ರಮುಖ 5 ವಿಕೆಟ್ಗಳನ್ನು ಕಳೆದುಕೊಂಡು 164 ರನ್ ಕಲೆಹಾಕಿದೆ. ಈ ಮೂಲಕ ಭಾರತ ಇನ್ನೂ 310 ರನ್ಗಳ ಹಿನ್ನಡೆಯಲ್ಲಿದೆ.
ತಂಡದ ಪರ ಯಶಸ್ವಿ ಜೈಸ್ವಾಲ್ ಮಾತ್ರ 82 ರನ್ಗಳ ಉಪಯುಕ್ತ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಮತ್ತದೆ ನಿರಸ ಪ್ರದರ್ಶನ ಕಂಡುಬಂತು. ತಂಡದ ಪರ ರಿಷಬ್ ಪಂತ್ 6 ರನ್ ಹಾಗೂ ರವೀಂದ್ರ ಜಡೇಜಾ 4 ರನ್ ಕಲೆಹಾಕಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಇಡೀ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಿಂದಲೂ ಬಿಗಿ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಎರಡನೇ ದಿನದಾಟದಲ್ಲೂ ಅದನ್ನು ಮುಂದುವರೆಸಿತು. ಎರಡನೇ ದಿನದಾಟದ ಮೂರು ಸೆಷನ್ಗಳಲ್ಲಿ ಆಸ್ಟ್ರೇಲಿಯಾವೇ ಪಾರುಪತ್ಯ ಮೆರೆಯಿತು. ದಿನದಾಟದ ಕೊನೆಯ ಸೆಷನ್ನಲ್ಲಿ ಟೀಂ ಇಂಡಿಯಾ ಒಂದು ಹಂತದಲ್ಲಿ 2 ವಿಕೆಟ್ಗೆ 153 ರನ್ ಕಲೆಹಾಕಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆರು ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತು.