ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮೇ ತಿಂಗಳಿನಲ್ಲಿ 121 ವರ್ಷಗಳಲ್ಲೇ ಎರಡನೇ ಬಾರಿ ಅತಿ ಹೆಚ್ಚು ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಚಂಡಮಾರುತಗಳು ಅಪ್ಪಳಿಸಿದ ಪರಿಣಾಮ ಹೆಚ್ಚಿನ ಮಳೆ ಆಗಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ದೇಶಾದ್ಯಂತ 2021ರ ಮೇ ತಿಂಗಳಿನಲ್ಲಿ 107.9 ಮಿ.ಮೀ. ಮಳೆ ದಾಖಲಾಗಿದ್ದು, ದೀರ್ಘಾವಧಿ ಸರಾಸರಿ ಮಳೆಗಿಂತ ಶೇ. 74 ಹೆಚ್ಚು ಮಳೆ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ. 1990ರಲ್ಲಿ 110.7 ಮಿ.ಮೀ. ಮಳೆ ದಾಖಲಾಗಿದ್ದು, 1901ರ ನಂತರ ಎರಡನೇ ಬಾರಿ ಮೇ ತಿಂಗಳಿನಲ್ಲಿ ಅತಿ ಹೆಚ್ಚು ದಾಖಲಾಗಿದೆ.
2021ರ ಮೇ ತಿಂಗಳಿನಲ್ಲಿ ಸರಾಸರಿ 34.18 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, 1901ರ ನಂತರ ನಾಲ್ಕನೇ ಬಾರಿ ದಾಖಲಾಗಿರುವ ಅತಿ ಕಡಿಮೆ ತಾಪಮಾನ ಇದಾಗಿದೆ.