ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಆರಂಭವಾಗಿದೆ.
ಇಂದು ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಆರು ಗಂಟೆಯವರೆಗೆ ನಡೆಯಲಿದೆ. ಪಶ್ಚಿಮ ಬಂಗಾಳದ 7 ಜಿಲ್ಲೆಗಳ 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಸುಮಾರು 3.22 ಕೋಟಿ ಮತದಾರರು ಇಂದು 1,448 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಈ ಬಾರಿ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಡುವೆ ಪೈಪೋಟಿ ನಡೆಯಲಿದೆ. ಸಂಜೆ ಆರುವರೆ ನಂತರ ಎಕ್ಸಿಟ್ ಪೋಲ್ ಅಂಕಿ ಅಂಶಗಳು ಪ್ರಕಟವಾಗಲಿವೆ.



