June 26, 2026
Friday, June 26, 2026
spot_img

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ-1 ಆರಂಭ, ಎಷ್ಟು ಮಕ್ಕಳು ಎಕ್ಸಾಂ ಬರೀತಿದ್ದಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಾಳೆಯಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದೆ.

ಈಗಾಗಲೇ ವಿದ್ಯಾರ್ಥಿಗಳು ಎಲ್ಲ ತಯಾರಿ ನಡೆಸಿದ್ದು, ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಈ ಬಾರಿ ಒಟ್ಟಾರೆ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದ್ದು ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಪರೀಕ್ಷೆಗೆ ನೋಂದಾಯಿಸಿರುವ 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ 6,46,801 ತರಗತಿ ವಿದ್ಯಾರ್ಥಿಗಳು (ಫ್ರೆಶರ್ಸ್‌), 50,540 ಪುನರಾವರ್ತಿತ, 13,022 ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ಮಂದಿ ನೋಂದಾಯಿಸಿದ್ದಾರೆ ಎಂದು ಮಂಡಳಿ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !