ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮದ್ಯಾಹ್ನ 11.30ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಅವರು ಇಂದು ಮದ್ಯಾಹ್ನ ಫಲಿತಾಂಶದ ಕುರಿತು ಸುದ್ದಿಗೋಷ್ಟಿ ನಡೆಸಲಿದ್ದಾರೆ.
ಸುಮಾರು 6ಲಕ್ಷದ 84 ಸಾವಿರ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಫಲಿತಾಂಶ ವೀಕ್ಷಣೆಗೆ www.karreuslts.nic.in ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದ್ದು ಮದ್ಯಾಹ್ನ 12 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.