ಹೊಸದಿಗಂತ ಡಿಜಿಟಲ್ ಡೆಸ್ಕ್:
2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1, 2 ಮತ್ತು 3ಗಳ ಕ್ರೋಡೀಕೃತ ಫಲಿತಾಂಶದ ಅಂಕಿ-ಅಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದೆ .
ಮೂರೂ ಪರೀಕ್ಷೆಗಳಲ್ಲೂ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆಗೆ ಒಟ್ಟು 7,20,593 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ 7,04,920 ಮಂದಿ ಹಾಜರಾಗಿದ್ದರು. ಇವರಲ್ಲಿ 5,98,283 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಶೇ. 84.87 ಫಲಿತಾಂಶ ಬಂದಿದೆ.
ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶವನ್ನು ವಿದ್ಯಾರ್ಥಿಗಳು hups://kseeb.karnataka.gov.in/ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಕ್ರೋಡೀಕೃತ ಫಲಿತಾಂಶದ ಅಂಕಿ-ಅಂಶ
ಪರೀಕ್ಷೆಗೆ ನೋಂದಣಿಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ : 7,20,593
ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ: 7,04,920
ಎಲ್ಲಾ ವಿಷಯಗಳಿಗೆ ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ : 15,673
ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ : 5,98,283
ಶೇಕಡವಾರು ಉತ್ತೀರ್ಣ : ಶೇ. 84.87
ಜಿಲ್ಲೆಗಳ ಶೇ. ಫಲಿತಾಂಶ(ಹೊಸಬರು ಮಾತ್ರ)
ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ದಕ್ಷಿಣ ಕನ್ನಡ ಜಿಲ್ಲೆ ಶೇ.98.59 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನದಲ್ಲಿ ಉಡುಪಿ (ಶೇ.98.45), ಮೂರನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ (ಶೇ.94.64) ಪಡೆದಿದ್ದು, ಕೊನೆಯ ಸ್ಥಾನದಲ್ಲಿ ರಾಯಚೂರು ಜಿಲ್ಲೆ (ಶೇ.78.12) ಇದೆ.