Tuesday, October 3, 2023

Latest Posts

ಆಗಸ್ಟ್ 21 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದ್ವಿತೀಯ ಪಿಯುಸಿ ಪರೀಕ್ಷೆ-2 ಆಗಸ್ಟ್ 21 ರಿಂದ ಸೆಪ್ಟೆಂಬರ್ 02 ರವರೆಗೆ ನಡೆಸಲಾಗುತ್ತಿದ್ದು, ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳು ಈ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದ್ದು, ಅದೇನೆಂದರೆ…

1) ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.
2) ಬ್ಲೂಟೂತ್ ಡಿವೈಸ್, ವಾಚ್. ಎಲೆಕ್ಟ್ರಾನಿಕ್ ಕ್ಯಾಲುಕೇಟರ್ ಗೆ ನಿರ್ಬಂಧ ವಿಧಿಸಲಾಗಿದ್ದು, ಸಾಮಾನ್ಯ ಕ್ಯಾಲುಕೇಟರ್ ಗೆ ಮಾತ್ರ ಅನುಮತಿ ನೀಡಲಾಗಿದೆ.
3) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳ (examination centres) ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಜೆರಾಕ್ಸ್, ಟೈಪಿಂಗ್ ಸೈಬರ್ ಸೆಂಟರ್ ನಿಷೇಧಿಸಲಾಗಿದೆ

ಪೂರಕ ಪರೀಕ್ಷೆ -2 ವೇಳಾಪಟ್ಟಿ
21-08-2೦23- ಸೋಮವಾರ- ಕನ್ನಡ ಹಾಗೂ ಅರೇಬಿಕ್
22-08-23- ಮಂಗಳವಾರ ಐಚ್ಛಿಕ ಕನ್ಬಡ, ರಾಸಾಯನ, ಮೂಲಗಣಿತ
23-08-23- ಬುಧವಾರ- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
24-08-23- ಗುರುವಾರ- ತರ್ಕ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ವ್ಯಾವಹಾರ ಅಧ್ಯಯನ
25-08-23- ಶರವಾರ- ಇತಿಹಾಸ, ಸಂಖ್ಯಾಶಾಸ್ತ್ರ
26-08-23 ಇಂಗ್ಲಿಷ್
28-08-23- ಭೂಗೋಳಶಾಸದರತ, ಮನಃ ಶಾಸ್ತ್ರ, ಭೌತಶಾಸ್ತ್ರ
29-08-23- ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ಶಾಸ್ತ್ರ
30-08-23 – ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
21-08-23- ಹಿಂದಿ
01-09-2023 – ಅರ್ಥ ಶಾಸ್ತ್ರ, ಜೀವಶಾಸ್ತ್ರ

KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣ
ದ್ವಿತೀಯ PUC ಪೂರಕ ಪರೀಕ್ಷೆ-2 ಹಿನ್ನೆಲೆ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.ಕ.ರಾ.ರ.ಸಾ.ನಿಗಮವು ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ವಾಪಸ್ ಆಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!