ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಮಂಗಳವಾರ ಪ್ರಕಟಗೊಳ್ಳಲಿದೆ. ಮಧ್ಯಾಹ್ನ 3 ಗಂಟೆ ನಂತರ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಜೂನ್ 24 ರಿಂದ ಜುಲೈ 5 ರವರೆಗೂ ರಾಜ್ಯದಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಮಂಗಳವಾರ ಮಧ್ಯಾಹ್ನ ಫಲಿತಾಂಶ ಪ್ರಕಟವಾಗುತ್ತಿದೆ. ಮಧ್ಯಾಹ್ನ 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಮೊದಲ ವರ್ಷದ ಮೂರನೇ ಪರೀಕ್ಷೆ ರಾಜ್ಯದಲ್ಲಿ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆದಿದ್ದವು. ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣ ದಳಗಳನ್ನು ನಿಯೋಜಿಸಲಾಗಿತ್ತು.

ಕಲಾ ವಿಭಾಗದಲ್ಲಿ 19,113 ಬಾಲಕರು, 11,698 ಬಾಲಕಿಯರು ಸೇರಿ 30,811 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8,817 ಬಾಲಕರು, 10,966 ಬಾಲಕಿಯರು ಸೇರಿ ಒಟ್ಟು 19,783 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 16,428 ಬಾಲಕರು, 8,973 ಬಾಲಕಿಯರು ಸೇರಿ ಒಟ್ಟು 25,401 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಒಟ್ಟಾರೆ 44,358 ಬಾಲಕರು, 31,637 ಬಾಲಕಿಯರು ಸೇರಿ ಒಟ್ಟು 75,995 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -3 ಹೆಸರು ನೋಂದಾಯಿಸಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!