ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗಲಿದೆ. ಮಾರ್ಚ್ 20 ರವರೆಗೆ ನಡೆಯಲಿರುವ ಈ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಮತ್ತು ಮುಖ್ಯ ಅಧೀಕ್ಷಕರು ಹಲವಾರು ನಿಯಮಗಳನ್ನು ಪಾಲಿಸಲು ಈಗಾಗ್ಲೇ ಸೂಚನೆ ಸಿಕ್ಕಿದೆ. ಅವು ಹೀಗಿದೆ……
ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ ಮಾಡಿದೆ.
ಮುಖ್ಯ ಅಧೀಕ್ಷಕರು ಕ್ಯಾಮರಾ ಇಲ್ಲದ ಸಾಮಾನ್ಯ ಮೊಬೈಲ್ ಮಾತ್ರ ಜೊತೆಗಿಟ್ಟುಕೊಳ್ಳಬಹುದು.
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವಂತಿಲ್ಲ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತು ಹಾಗೂ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.
ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ.