ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಶನಿವಾರದಿಂದ ರಾಜ್ಯಾದ್ಯಂತ ಆರಂಭವಾಗಿದ್ದು, ಮಾರ್ಚ್ 20ರವರೆಗೆ ನಡೆಯಲಿವೆ.
ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆಯಲಿದ್ದಾರೆ.
ಎಲ್ಲ ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್, ಎಲೆಕ್ಟ್ರಾನಿಕ್ ವಾಚ್, ಕ್ಯಾಲುಕೇಟರ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಾಲಾಗಿದೆ. ಜೆರಾಕ್ಸ್ ಅಂಗಡಿಗಳಿಗೆ ನಿರ್ಬಂಧಿಸಲಾಗಿದೆ. ಮತ್ತು ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.