ಇಂದಿನಿಂದ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಪ್ರಾರಂಭವಾಗಿದೆ. ಸೆಪ್ಟೆಂಬರ್ 02ರ ವರೆಗೆ ಪರೀಕ್ಷೆಗಳು ನಡೆಯಲಿವೆ.

ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಪರೀಕ್ಷಾ ಕೇಂದ್ರಗಳ (examination centres) ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಜೆರಾಕ್ಸ್, ಟೈಪಿಂಗ್ ಸೈಬರ್ ಸೆಂಟರ್ ನಿಷೇಧಿಸಲಾಗಿದೆ.

ದ್ವಿತೀಯ PUC ಪೂರಕ ಪರೀಕ್ಷೆ-2 ಹಿನ್ನೆಲೆ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಕ.ರಾ.ರ.ಸಾ.ನಿಗಮವು ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ವಾಪಸ್ ಆಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!