ಹೊಸದಿಗಂತ ಡಿಜಿಟಲ್ ಡೆಸ್ಕ್:
ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ನೋಂದಣಿಗೆ ಆಗಸ್ಟ್ 12ರ ವರೆಗೆ ಅವಕಾಶ ನೀಡಲಾಗಿದೆ.
ಇದೇ ಬಾರಿಗೆ ಒಂದೇ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿ ಪೂರಕ ನಡೆಸಲಾಗುತ್ತಿದ್ದು, 2022-23ನೇ ಸಾಲಿನಲ್ಲಿ ಹಾಗೂ ಅದಕ್ಕೂ ಮುನ್ನ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ. ಈ ಮುಂಚೆ ನೊಂದಣಿಗೆ ಆ.10ರ ವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅವಧಿಯನ್ನು ಆಗಸ್ಟ್ 12ರ ವರೆಗೆ ವಿಸ್ತರಿಸಲಾಗಿದೆ.
ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ಪರೀಕ್ಷೆಗಳು ಜರುಗಲಿದ್ದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕಾಲೇಜಿನ ಲಾಗಿನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು. ಆನ್‌ಲೈನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ಮಂಡಳಿ ತಿಳಿಸಿದೆ.
ಪರೀಕ್ಷೆಗೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಲಿಯ ವೆಬ್‌ಸೈಟ್ https://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ.