ಸೆ.12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ: ಸಚಿವ ನಾಗೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 12ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.
ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಬಾರಿಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲಾಗಿತ್ತು. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಒಟ್ಟು 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!