ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಪರೀಕ್ಷೆ ಬರೆದವರು ಫಲಿತಾಂಶಕ್ಕಾಗಿ ಇಲಾಖೆಯ ಅಧಿಕೃತ ವೆಬ್‌ತಾಣ karresults.nic.in ನಲ್ಲಿ ಬೆಳಗ್ಗೆ 11 ಗಂಟೆಯಿಂದ ಲಾಗ್‌ ಇನ್ ಆಗಿ ಫಲಿತಾಂಶವನ್ನು ವೀಕ್ಷಿಸಬಹುದು.

ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಮೇ 23 ರಿಂದ ಜೂನ್ 3ರ ವರೆಗೆ ನಡೆಸಲಾಗಿತ್ತು.

ಮಾರ್ಚ್‌ 9 ರಿಂದ 29ರ ವರೆಗೆ 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಅದರ ಫಲಿತಾಂಶವನ್ನು ಏಪ್ರಿಲ್‌ 21ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (kseeb) ಪ್ರಕಟಿಸಿತ್ತು.

ಏಪ್ರಿಲ್‌ 21ರಂದು ಬಿಡುಗಡೆಯಾದ ಫಲಿತಾಂಶದಲ್ಲಿ ಅನುತ್ತೀರ್ಣರಾದ ಹಾಗೂ ತಾವು ಗಳಿಸಿದ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆದಿದ್ದರು. ಇದರ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!