ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜಾಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಭಾರತ ಬ್ಯಾಟಿಂಗ್ ಆಹ್ವಾನ ಪಡೆದಿದೆ.
ಈ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಪಡಿಸಿದರೆ ಹೆಚ್ಚುವರಿ 250 ನಿಮಿಷವನ್ನು ನೀಡಲಾಗಿದೆ. ಆದರೆ ಮೀಸಲು ದಿನ ಇಲ್ಲ. ಹೆಚ್ಚುವರಿ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ, ಸೂಪರ್-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿರುವ ಭಾರತ ನೇರವಾಗಿ ಫೈನಲ್ ಪ್ರವೇಶಿಸಲಿದೆ.
ಭಾರತ ಮತ್ತು ಇಂಗ್ಲೆಂಡ್ ಇದುವರೆಗೆ ಟಿ20 ಕ್ರಿಕೆಟ್ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.