ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್: ಭಾರತ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್​ ತಂಡದ ನಾಯಕ ಜಾಸ್​ ಬಟ್ಲರ್​ ಬೌಲಿಂಗ್​ ಆಯ್ದುಕೊಂಡಿದ್ದಾರೆ. ಭಾರತ ಬ್ಯಾಟಿಂಗ್​ ಆಹ್ವಾನ ಪಡೆದಿದೆ.

ಈ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಪಡಿಸಿದರೆ ಹೆಚ್ಚುವರಿ 250 ನಿಮಿಷವನ್ನು ನೀಡಲಾಗಿದೆ. ಆದರೆ ಮೀಸಲು ದಿನ ಇಲ್ಲ. ಹೆಚ್ಚುವರಿ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ, ಸೂಪರ್​-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿರುವ ಭಾರತ ನೇರವಾಗಿ ಫೈನಲ್​ ಪ್ರವೇಶಿಸಲಿದೆ.

ಭಾರತ ಮತ್ತು ಇಂಗ್ಲೆಂಡ್​ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್​ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್ ಸೆಮಿಫೈನಲ್​ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್​ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!