ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ವಿರುದ್ಧ ʻದೇಶದ್ರೋಹಿʼ ಹೇಳಿಕೆ ನೀಡಿದ ಆರೋಪದ ಮೇಲೆ ಮುಂಬೈನಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟ್ಯಾಂಡ್-ಅಪ್ ಕಾಮೆಡಿಯನ್ ಕುನಾಲ್ ಕಮ್ರಾಗೆ ಪೊಲೀಸರು 2ನೇ ಸಮನ್ಸ್ ಜಾರಿಗೊಳಿಸಿದ್ದಾರೆ.
ಶಿವಸೇನಾ ಶಾಸಕ ಮುರ್ಜಿ ಪಟೇಲ್ ಸಲ್ಲಿಸಿದ ದೂರಿನ ಮೇರೆಗೆ ಮುಂಬೈನ ಖಾರ್ ಪ್ರದೇಶದ ಪೊಲೀಸರು ಕಾಮ್ರಾಗೆ 2ನೇ ನೋಟಿಸ್ ಜಾರಿಮಾಡಿದ್ದು, ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲಾವಕಾಶ ನೀಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.