ಅಫ್ಘಾನಿಸ್ತಾನ ವಿರುದ್ಧ ಎರಡನೇ ಟಿ20: ಕೊಹ್ಲಿ ಬ್ಯಾಕ್, ಇಂಡಿಯಾ ಬೌಲಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ (Holkar Stadium in Indore) ನಡೆಯುತ್ತಿದೆ.

ಮೊದಲ ಪಂದ್ಯವನ್ನು ಗೆದ್ದುಕೊಂಡಿರುವ ಭಾರತ ಇಂದು ಕೂಡ ಅಫ್ಘಾನಿಸ್ತಾನವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ಸರಣಿಯನ್ನು ಕೈವಶ ಮಾಡಿಕೊಳ್ಳಲಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲೂ ಬದಲಾವಣೆ ಕಂಡುಬಂದಿದೆ.

ಎರಡನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಿದೆ. ಯಶಸ್ವಿ ಜೈಸ್ವಾಲ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಆಡುವ ಹನ್ನೊಂದರೊಳಗೆ ಪ್ರವೇಶಿಸಿದ್ದಾರೆ.ಇದೀಗ ಯಶಸ್ವಿ ಪ್ರವೇಶದಿಂದಾಗಿ ಶುಭ್‌ಮನ್ ಹೊರಗುಳಿಯಬೇಕಾಗಿದೆ. ಹಾಗೆಯೇ ವಿರಾಟ್ ವಾಪಸಾತಿಯಿಂದಾಗಿ ತಿಲಕ್ ವರ್ಮಾ ಕೂಡ ತಂಡದಿಂದ ಹೊರಗುಳಿಯಬೇಕಾಗಿದೆ.

ಮತ್ತೊಂದೆಡೆ, ಅಫ್ಘಾನಿಸ್ತಾನ ತಂಡ ಕೂಡ ಪ್ಲೇಯಿಂಗ್ ಇಲೆವೆನ್‌ನಲ್ಲಿ 1 ಬದಲಾವಣೆ ಮಾಡಿದೆ. ನೂರ್ ಅಹಮದ್ ಪ್ಲೇಯಿಂಗ್ ಇಲೆವೆನ್‌ಗೆ ಎಂಟ್ರಿ ಕೊಟ್ಟಿದ್ದರೆ. ರಹಮತ್ ಶಾ ಅವರನ್ನು ತಂಡದಿಂದ ಹೊರಗಿಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!