ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಮೊದಲ ಪಂದ್ಯವನ್ನು ಟೀಂ ಇಂಡಿಯಾ 43 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲಿದ್ದು, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳಲಿದೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.
ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಕುಸಲ್ ಪೆರೆರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕಾ (ನಾಯಕ), ದಸುನ್ ಶನಕ, ವನಿಂದು ಹಸರಂಗ, ರಮೇಶ್ ಮೆಂಡಿಸ್, ಮಹಿಷ್ ತೀಕ್ಷಣ, ಮತಿಶ ಪತಿರಾನ, ಅಸಿತ ಫೆರ್ನಾಂಡೊ.