Tuesday, March 28, 2023

Latest Posts

ಆಸ್ಟ್ರೇಲಿಯಾ ವಿರುದ್ದದ ದ್ವಿತೀಯ ಟೆಸ್ಟ್​ ಪಂದ್ಯ: ಟೀಮ್ ಇಂಡಿಯಾ ಸೇರಿಕೊಂಡ ಶ್ರೇಯಸ್ ಅಯ್ಯರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯಕ್ಕೆ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(shreyas iyer) ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ವಿಚಾರವನ್ನು ಬಿಸಿಸಿಐ(BCCI) ಮಂಗಳವಾರ(ಫೆ.14) ಖಚಿತಪಡಿಸಿದೆ.
‘ಟೀಮ್​ ಇಂಡಿಯಾದ ಆಟಗಾರ ಶ್ರೇಯಸ್ ಅಯ್ಯರ್ ಅವರು ಬೆನ್ನುನೋವಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅವರನ್ನು ಬಾರ್ಡರ್-ಗವಾಸ್ಕರ್ ಟ್ರೋಫಿಯ ದ್ವಿತೀಯ ಪಂದ್ಯಕ್ಕೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ’ ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯ ಫೆ. 17 ರಿಂದ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿದೆ. ಒಂದೊಮ್ಮೆ ದ್ವಿತೀಯ ಪಂದ್ಯದಲ್ಲಿ ಅಯ್ಯರ್​ಗೆ ಆಡುವ ಅವಕಾಶ ಸಿಕ್ಕರೆ ಸೂರ್ಯಕುಮಾರ್​ ಯಾದವ್​ ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆ ಇದೆ.

ದ್ವಿತೀಯ ಟೆಸ್ಟ್​ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್​ದೀಪ್​ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!