ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 12 ರಿಂದ ಶ್ರೀಲಂಕಾ -ಭಾರತ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಪಂದ್ಯ ವೀಕ್ಷಣೆಗೆ ಅಭಿಮಾನಿಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಇನ್ನು ಪಂದ್ಯಕ್ಕೆ ಶೇ. 100 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ ಹಿನ್ನೆಲೆ ಗಿ ಬೆಂಗಳೂರಿಗರಿಗೆ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಸ್ಟೇಡಿಯಂ ಸುತ್ತಮುತ್ತ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಈ ಪಂದ್ಯ ಡೇ- ನೈಟ್ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ ಪಂದ್ಯ ಮುಗಿದ ನಂತರ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುವುದಂತ್ತೂ ಖಚಿತ. ಹೀಗಾಗಿ ಮುಂಜಾಗೃತ ಕ್ರಮವಾಗಿ ಕೆ.ಎಸ್.ಸಿ.ಎ. ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೆರಲಾಗಿದೆ.
ಅದರಲ್ಲೂ ಕ್ವಿನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೂ ಹಾಗೂ ಎಂ.ಜಿ ರಸ್ತೆಯಲ್ಲಿ ಕ್ಲೀನ್ಸ್ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್ವರೆಗೂ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅನುಮತಿ ನಿರಾಕರಿಸಲಾಗಿದೆ.