ಶೀಘ್ರದಲ್ಲಿ ರಾಜ್ಯಕ್ಕೆ ಬರಲಿದೆ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜುಲೈ ವೇಳೆಗೆ ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಈ ಕುರಿತು ಟ್ವಿಟ್ಟರ್‌ ನಲ್ಲಿ ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ ನೀಡಲಾಗುವುದು. ಬಹು ನಿರೀಕ್ಷೆಯ ಧಾರವಾಡ – ಬೆಂಗಳೂರು ಮಧ್ಯದ ವಂದೇ ಭಾರತ್ ರೈಲಿನ ಸೇವೆ ಇನ್ನು ಕೆಲವೇ ದಿನಗಳಲ್ಲಿ ವಿದ್ಯುಕ್ತವಾಗಿ ಆರಂಭವಾಗಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇಂದು ದೆಹಲಿಯಲ್ಲಿ ಕೇಂದ್ರ ರೈಲ್ವೇ ಮಂತ್ರಿ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದು, ರೈಲು ಸೇವೆಯ ಆರಂಭಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಅವಳಿ ನಗರದ ಜನರ ಬಹು ನಿರೀಕ್ಷಿತ ಈ ಉತ್ಕಷ್ಟ ರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದಾಗಿದೆ ಎಂದಿದ್ದಾರೆ.

https://twitter.com/JoshiPralhad/status/1663945488931115010?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!