ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಖಾಸಗಿ ಅಭ್ಯರ್ಥಿಗಳ ನೋಂದಾವಣೆ ದಿನಾಂಕ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2022ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ದಿನಾಂಕ 01-01-2022ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ 17-01-2022ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಖಾಸಗಿ ಅಭ್ಯರ್ಥಿಗಳ ನೋಂದಾಯಿಸಿಕೊಳ್ಳಲು ರೂ.500 ಹಾಗೂ ದಿನವೊಂದಕ್ಕೆ ರೂ.70ಗಳಂತೆ ಗರಿಷ್ಠ ರೂ.700 ಶುಲ್ಕದೊಂದಿಗೆ ಕಾಲೇಜಿನಲ್ಲಿ ದಿನಾಂಕ 05-01-2022 ರಿಂದ 17-01-2022ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
19-01-2022ರೊಳಗಾಗಿ ಖಜಾನೆಗೆ ಶುಲ್ಕವನ್ನು ಸಂದಾಯ ಮಾಡುವಂತೆ ಸೂಚಿಸಲಾಗಿದೆ. ಅಲ್ಲದೇ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಅರ್ಜಿಗಳನ್ನು ದಿನಾಂಕ 21-01-2022ರೊಳಗಾಗಿ ಸಲ್ಲಿಸುವಂತೆ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!