ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಹೇಗಿದೆ ತಯಾರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ.

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇನ್ನು ನಿಷೇಧಾಜ್ಞೆ ಜಾರಿಯಾಗಿರುವ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 9:30ರಿಂದ ಮಧ್ಯಾಹ್ನ 2ರವರೆಗೆ ಯಾವುದೇ ಝೆರಾಕ್ಸ್ ಅಂಗಡಿ ತೆರೆಯುವಂತಿಲ್ಲ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಬಾರಿ 80 ಅಂಕಕ್ಕೆ ಪರೀಕ್ಷೆ ಬರೆಯಲಿದ್ದು, 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

ಒಟ್ಟಾರೆ 6,98,624 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡುವುದಾದರೆ ಹಾಲ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಬಹುದು.

ಬೆಳಗ್ಗೆ 10:30ಕ್ಕೆ ಪರೀಕ್ಷೆ ಆರಂಭವಾಗಿ ಮಧ್ಯಾಹ್ನ 1:30ಕ್ಕೆ ಮುಗಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!