ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲ ದಿನವೇ 11 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಶುರುವಾಗಿದೆ. ಮೊದಲ ದಿನ ತರ್ಕಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್ ವಿಷಯಗಳ ಪರೀಕ್ಷೆ ನಡೆಡಿದ್ದು, ಮೊದಲ ದಿನವೇ 11,379 ವಿದ್ಯಾರ್ಥಿಗಳು ಹಲವು ಕಾರಣಗಳಿಂದ ಪರೀಕ್ಷೆಗೆ ಗೈರಾಗಿದ್ದಾರೆ.
ತರ್ಕಶಾಸ್ತ್ರ ಪರೀಕ್ಷೆಗೆ 620 ವಿದ್ಯಾರ್ಥಿಗಳು ನೋಂದಾಯಿಸಿದ್ದು, 552 ಹಾಜರಾಗಿದ್ದರೆ 68 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಬ್ಯುಸಿನೆಸ್ ಸ್ಟಡೀಸ್ ಪರೀಕ್ಷೆಗೆ 2,38,764 ವಿದ್ಯಾರ್ಥಿಗಳು ನೋಂದಾಯಿಸಿದರೆ 2,27,453 ಹಾಜರಾಗಿದ್ದು 11,311 ಗೈರು ಹಾಜರಾಗಿದ್ದಾರೆ.
ಯಾವುದೇ ವಿದ್ಯಾರ್ಥಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿ ಡಿಬಾರ್ ಆಗಿಲ್ಲ. ಯಾವುದೇ ವಿದ್ಯಾರ್ಥಿಗೂ ಕೋವಿಡ್ ಸೋಂಕು ದೃಢಪಟ್ಟಿಲ್ಲ ಎಂದು ಪಿಯು ಬೋರ್ಡ್ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!