Monday, July 4, 2022

Latest Posts

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಬೆಂಗಳೂರು ದಕ್ಷಿಣ ದ್ವಿತೀಯ ಸ್ಥಾನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 4,50,706 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. 1,47,056 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 68,729 ವಿದ್ಯಾರ್ಥಿಗಳು ಜಸ್ಟ್ ಪಾಸಾಗಿದ್ದಾರೆ.
ಇನ್ನು ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ಎರಡನೇ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣದ 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ಉಡುಪಿ ಜಿಲ್ಲೆಗೆ 4ನೇ ಸ್ಥಾನ ಲಭ್ಯವಾಗಿದೆ. ಉಡುಪಿ ಜಿಲ್ಲೆಯ 149 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ಹಾಸನ ಜಿಲ್ಲೆ 5ನೇ ಸ್ಥಾನ ಗಳಿಸಿದೆ. ಹಾಸನ ಜಿಲ್ಲೆಯ 104 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರೆತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss