ಹೊಸದಿಗಂತ ಡಿಜಿಟಲ್ ಡೆಸ್ಕ್:
ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂಸತ್ತಿನಲ್ಲಿ ಬಜೆಟ್ ಮೇಲಿನ ಸಾಮಾನ್ಯ ಚರ್ಚೆ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರ ಉತ್ತರಕ್ಕೆ ಪ್ರತಿಕ್ರಿಯಿಸುತ್ತಾ ಹಣದುಬ್ಬರವಿಲ್ಲ, ನಿರುದ್ಯೋಗ ಹೆಚ್ಚಿಲ್ಲ, ಬೆಲೆ ಏರಿಕೆ ಇಲ್ಲವೇ ಇಲ್ಲ ಎನ್ನುತ್ತಿದ್ದಾರೆ ಅವರಿಗೆ ಪ್ರಸ್ತುತ ಪರಿಸ್ಥಿತಿ ಬಗ್ಗೆ ತಿಳಿವಳಿಕೆ ಇಲ್ಲದಿರಬಹುದು ಎಂದು ಕಿಡಿಕಾರಿದ್ದಾರೆ.
ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಸೀತಾರಾಮನ್, ಅಮೆರಿಕನ್ ಡಾಲರ್ ವಿರುದ್ಧ ಭಾರತೀಯ ರೂಪಾಯಿ ಕುಸಿತದ ಹಿಂದೆ ಹಲವು ದೇಶೀಯ ಮತ್ತು ಜಾಗತಿಕ ಕಾರಣಗಳಿವೆ ಎಂದು ಹೇಳಿದಾಗ ಪ್ರಿಯಾಂಕಾ ಈ ಹೇಳಿಕೆ ನೀಡಿದ್ದಾರೆ.