ದೆಹಲಿ ಏರ್ ಪೋರ್ಟ್ ಸುತ್ತ ಸೆಕ್ಷನ್‌ 144 ಜಾರಿ: ಡ್ರೋನ್‌ ಹಾರಾಟ ಬ್ಯಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (IGI) ಆವರಣದಲ್ಲಿ ಡ್ರೋನ್‌ ಹಾರಾಟ ಹಾಗೂ ಲೇಸರ್‌ ಕಿರಣಗಳ ಚಟುವಟಿಕೆಗಳನ್ನು ನಡೆಸದಂತೆ ದೆಹಲಿ ಪೊಲೀಸರು ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿನ ಮುಂದಿನ ಪ್ರಧಾನ ಮಂತ್ರಿಗಳ (Prime Minister) ಪ್ರಮಾಣ ವಚನ ಸ್ವೀಕಾರ ಸಮಾರಂಭವೂ ಇರುವುದರಿಂದ ಏರ್‌ಪೋರ್ಟ್‌ನಲ್ಲಿ (Delhi Airport) ವಿವಿಐಪಿ ವಿಮಾನಗಳು ಚಲಿಸಲಿವೆ. ಆದ್ದರಿಂದ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಆದೇಶವು ಜುಲೈ 30ರ ವರೆಗೆ ಜಾರಿಯಲ್ಲಿರುತ್ತದೆ.

ಐಜಿಐ ವಿಮಾನ ನಿಲ್ದಾಣದಲ್ಲಿ ಏರ್‌ ಟ್ರಾಫಿಕ್‌ ಕಂಟ್ರೋಲ್‌ ಮತ್ತು ಲೇಸರ್‌ ಕಿರಣಗಳಿಂದ ಪೈಲಟ್‌ಗಳ ದೃಷ್ಟಿ ವಿಚಲಿತಗೊಳ್ಳುವ ಘಟನೆಗಳು ಬೆಳಕಿಗೆ ಬಂದಿವೆ. ವಿಮಾನಗಳ ಲ್ಯಾಂಡಿಂಗ್‌ ಸಂದರ್ಭದಲ್ಲಿ ಹೀಗೆ ಪೈಲಟ್‌ಗಳ ದೃಷ್ಟಿಯು ವಿಚಲಿತಗೊಳ್ಳವುದರಿಂದ ಸಿಬ್ಬಂದಿ ಹಾಗೂ ವಿಮಾನದ ಸುರಕ್ಷತೆಗೆ ಅಪಾಯ ಉಂಟುಮಾಡಬಹುದು. ಅಲ್ಲದೇ ವಿಮಾನ ನಿಲ್ದಾಣದ ಸುತ್ತಮುತ್ತ ಮನೆಗಳು, ಹೋಟೆಲ್‌ ರೆಸ್ಟೋರೆಂಟ್‌ಗಳು ಇದ್ದು, ಲೇಸರ್‌ ಹಾಗೂ ಲೈಟಿಂಗ್ಸ್‌ ಗಳನ್ನು ಬಳಸಲಾಗುತ್ತದೆ. ಇವು ಪೈಲಟ್‌ಗಳು ವಿಮಾನ ಲ್ಯಾಡಿಂಗ್‌ ಮಾಡುವ ಸಂದರ್ಭದಲ್ಲಿ ದೃಷ್ಟಿ ವಿಚಲನಕ್ಕೆ ಕಾರಣವಾಗುತ್ತದೆ. ಪ್ರಸ್ತುತ ಲೇಸರ್‌ ಕಿರಣಗಳ ಬಳಕೆ ನಿಯಂತ್ರಿಸಲು ಯಾವುದೇ ಪರ್ಯಾಯ ಕ್ರಮಗಳು ಇಲ್ಲದ ಕಾರಣ, ಜೀವಹಾನಿ ಮತ್ತು ವಿಮಾನ ಸುರಕ್ಷತೆಗಳ ಕಾರಣಕ್ಕೆ ಲೇಸರ್‌ ಚಟುವಟಿಕೆಗಳಿಗೆ ನಿಷೇಧಾಜ್ಞೆ (Section 144) ವಿಧಿಸಲಾಗಿದೆ.

ವಿಮಾನ ನಿಲ್ದಾಣ ಆವರಣದಲ್ಲಿ ಸಾರ್ವಜನಿಕರಿಂದ ಡ್ರೋನ್‌ ಹಾರಾಟಕ್ಕೂ ನಿಷೇಧ ಹೇರಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಐಪಿಸಿ ಸೆಕ್ಷನ್‌ 188 ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!