ಬೀದರ್ ಹೊಸದಿಗಂತ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಬೀದರ ತಾಲ್ಲೂಕಿನ ಬಿ.ವ್ಹಿ.ಭೂಮರೆಡ್ಡಿ ವಿದ್ಯಾಲಯದಲ್ಲಿ ಜೂನ್ 4 ರಂದು ಮತ ಎಣಿಕೆ ನಡೆಯುವುದರಿಂದ ಮತ ಎಣಿಕೆಯ ನಂತರವೂ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು, ಗಲಭೆ, ಗಲಾಟೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜೂನ್.4ರ ಬೆಳಿಗ್ಗೆ 6:00 ಗಂಟೆಯಿಂದ ಜೂನ್.5ರ ಬೆಳಿಗ್ಗೆ 6:00 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ಬೀದರ್ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿರುತ್ತಾರೆ.
ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಸೇರವುದು, ಯಾವುದೇ ವಿಧದ ಆಯುಧಗಳು ಹೊಂದುವುದನ್ನು ಮತ್ತು ಸಾಗಾಟ ಮಡುವುದು ನಿಷೇಧಿಸಿದೆ ಹಾಗೂ ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿರುತ್ತದೆ.
ಈ ಆದೇಶವು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳಿಗೆ, ಶವ ಸಂಸ್ಕಾರಕ್ಕೆ ಹಾಗೂ ಸರ್ಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದು ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವವಣೆ ವೇಳೆ ಲಾಠಿ/ಬಂದೂಕುಗಳನ್ನು ಉಪಯೋಗಿಸುವುದಕ್ಕೆ ಹಾಗೂ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿರುತ್ತಾರೆ.