ಕೊಲ್ಲಾಪುರದಲ್ಲಿ ಸೆಕ್ಷನ್ 144 ಜಾರಿ, ಬೆಳಗಾವಿಯಲ್ಲೂ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದ್ದು, ಇದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ.

ಪ್ರತಿಭಟನೆ ಈಗಾಗಲೇ ಹಿಂಸಾಚಾರ ರೂಪ ಪಡೆದಿದ್ದು, ಸೆಕ್ಷನ್ 144 ಜಾರಿ ಮಾಡಲಾಗಿದೆ. ಇದರ ಜತೆಗೆ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ಪೊಲಿಸರು ಸೂಕ್ಷ್ಮ ನಿಗಾ ವಹಿಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಿಗಾ ವಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!