ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.
ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ಇಂದು ನಾಗಮಂಗಲ ಬಂದ್‌ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಹಾಗೂ ಇತರೇ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.