Wednesday, August 10, 2022

Latest Posts

ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ:‌ 4ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಗರದ ಹೊರ ವಲಯದ ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ನಡೆದ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜು.29ರಂದು ಸುರತ್ಕಲ್, ಬಜಪೆ, ಮುಲ್ಕಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ರಜೆ ಘೋಷಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10ರಿಂದ ರಾತ್ರಿ 11ರವರೆಗೆ ಮದ್ಯ ಮಾರಾಟ ನಿಷೇಧಿಸಲು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss