Monday, July 4, 2022

Latest Posts

ಬೆಳಗಾವಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಿವಾಜಿ ಮಹಾರಾಜ, ಸಂಗೊಳ್ಳಿ ರಾಯಣ್ಣ ಪ್ರತಿಮೆಗಳಿಗೆ ಅಪಮಾನ ಪ್ರಕರಣ ಸಂಬಂಧ ಬೆಳಗಾವಿಯಲ್ಲಿ ಜಾರಿಗೊಳಿಸಿರುವ 144 ಸೆಕ್ಷನ್ ನಿಷೇಧಾಜ್ಞೆ ಸೋಮವಾರದವರೆಗೆ ಮುಂದುವರೆಯಲಿದೆ.
ಈಗಾಗಲೇ ಘಟನೆ ಖಂಡಿಸಿ ಬೆಳಗಾವಿಯಲ್ಲಿ ಕಲ್ಲು ತೂರಾಟ, ಗಲಭೆ ನಡೆದಿತ್ತು. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರ ಮತ್ತು ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.ಇದೀಗ ಅದನ್ನು ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ವೇಳೆ ಐದಕ್ಕಿಂತ ಹೆಚ್ಚು ಜನರು ಸೇರದಂತೆ ಮತ್ತು ಸಭೆ-ಸಮಾರಂಭ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ. ಸದ್ಯ ಬೆಳಗಾವಿ ಬೂದಿ ಮುಚ್ಚಿದ ಕೆಂಡದಂತಿದೆ. ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss