ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಇನ್ನಷ್ಟು ಬಿಗಿ: ಏನಿದೆ ನೂತನ ಆದೇಶ? ಇಲ್ಲಿದೆ ಮಾಹಿತಿ….

ಹೊಸದಿಗಂತ ವರದಿ, ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಬಿಗಿಗೊಳಿಸಲಾಗಿದ್ದು, ಆ.8ರವರೆಗೆ ಮುಂದುವರಿಸಲಾಗಿದೆ. ಈ ನಡುವೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ನಿರಾಕರಿಸಲಾಗಿದೆ.
ಈ ಕುರಿತು ಮಂಗಳೂರು ನಗರ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದು, 144 ಸಿ.ಆರ್.ಪಿ.ಸಿ ಕಾಯ್ದೆಯನ್ವಯ 05-08-2022 ರ  ಸಂಜೆ  6. 00 ಗಂಟೆಯಿಂದ ದಿನಾಂಕ: 08-08-2022 ರ ಬೆಳಿಗ್ಗೆ 6. 00 ಗಂಟೆ ವರೆಗೆ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಈ ಕೆಳಗಿನ ಈ ಆದೇಶಗಳನ್ನು ಹೊರಡಿಸಲಾಗಿದೆ.

ಆದೇಶದಲ್ಲೇನಿದೆ….

1 ಸಂಜೆ 6. 00 ಗಂಟೆಯಿಂದ ಬೆಳಿಗ್ಗೆ 6. 00 ಗಂಟೆವರೆಗೆ ಎಲ್ಲಾ ಮಾದರಿಯ ದ್ವಿಚಕ್ರ ವಾಹನದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು, ಮಹಿಳೆಯರು, 18 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ, ಯುವಕರು,ಪುರುಷ ಸಹ ಸವಾರರ ಓಡಾಟವನ್ನು ನಿರ್ಬಂಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಯಾ ಪದ ಹಾಡುವುದು, ಚೇಷ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಯಾ ಪುಸಾರ ಮಾಡುವುದು, ಸಭ್ಯತನ, ಸದಾಚಾರ, ಸಾರ್ವಜನಿಕ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದ. ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವವರ ವಿರುದ್ಧ ಕ್ರಮ

3 ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು 5 ಜನರು ಯಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು , ತಿರುಗಾಡುವುದನ್ನು ನಿಷೇಧಿಸಲಾಗಿದೆ.

4 ಶಸ್ತ್ರಗಳು, ದೊಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾರಿಗಳನ್ನು, ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧ.

5 ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧ.

6 ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧ.

7 ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು.

8 ಸರ್ಕಾರಿ ಸಂಸ್ಥೆಗಳು/ ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂಧಿಗಳ ವಿರುದ್ಧ ನಿಂಧಿಸುವಂತಹ ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು/ಭಾಷಣಗಳು ಪ್ರಕಟಣೆಗಳು/ ಅವಾಚ್ಯ ಶಬ್ದಗಳ ಬಳಿಕೆ/ಪ್ರಚೋದನಾಕಾರಿ ಭಾಷಣ/ಗಾಯನ ಇತ್ಯಾಧಿ ಚಟುವಟಿಕೆಗಳ ನಿಷೇಧ.

9 ಯಾವುದೇ ಖಾಸಗಿ ಜಾತಿ/ಧರ್ಮ/ ಕೋಮು/ಪಂಧಗಳಿಗೆ ಅಥವಾ ಸಾರ್ವಜನಿಕ ನೈಜಕತೆಗೆ ಭಾದಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧ

10 ಯಾವುದೇ ಖಾಸಗಿ ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಯಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!