ಆಳಂದ ತಾಲೂಕಿನಲ್ಲಿ ಮಾರ್ಚ್ 5 ವರೆಗೆ 144 ಸೆಕ್ಷನ್: ಕಲಬುರಗಿ ಜಿಲ್ಲಾಧಿಕಾರಿ ಆದೇಶ

ಹೊಸದಿಗಂತ ವರದಿ, ಕಲಬುರಗಿ:

ಜಿಲ್ಲೆಯ ಆಳಂದ ತಾಲೂಕಿನಲ್ಲಿ ಮುಂಬರುವ ಮಾಚ್೯ 5ರ ಬೆಳಿಗ್ಗೆ 6 ಗಂಟೆಯವರೆಗೆ 144 ನಿಷೇಧಾಜ್ಞೆ ಮುಂದುವರೆಸಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕರ ಆದೇಶ ಹೊರಡಿಸಿದ್ದಾರೆ.

ತಾಲೂಕಿನಾದ್ಯಂತ ಶಾಂತಿ,ಕಾನೂನು ಸುವ್ಯವಸ್ಥೆ ಹಾಗೂ ಸೌಹಾರ್ದತೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮಾಚ್೯ 5ರ ಬೆಳಿಗ್ಗೆ 6 ಗಂಟೆಯವರೆಗೆ 144 ಸಿ.ಆರ್.ಪಿ.ಸಿ.ಕಲಂ ನಿಷೇಧಾಜ್ಞೆ ಜಾರಿ ಮಾಡಿದ್ದು, ಎಲ್ಲಾ ತರಹದ ಮಧ್ಯ ಮಾರಾಟಕ್ಕೆ ಮತ್ತು ಬಾರ್ ಮತ್ತು ರೆಷ್ಟೋರೆಂಟಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಇದಕ್ಕೂ ಮುನ್ನ ಮಾಚ್೯ 3ರ,ವರೆಗೆ 144 ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.ಆದರೆ ಆಳಂದ ಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ನಿಮಾ೯ಣವಾದ ಬೆನ್ನಲ್ಲೇ, ನಿಷೇಧಾಜ್ಞೆ ಮುಂದುವರೆಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!