Saturday, October 1, 2022

Latest Posts

ಸಿಕಂದರಾಬಾದ್‌ನ ಹೊಟೇಲ್‌ನಲ್ಲಿ ಬೆಂಕಿ: ಎಂಟು ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಕಂದರಾಬಾದ್‌ನ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ.
ಮಾರ್ಕೆಟ್ ಠಾಣಾ ವ್ಯಾಪ್ತಿಯ ರೂಬಿ ಹೊಟೇಲ್‌ನಲ್ಲಿ ಅವಘಡ ಸಂಭವಿಸಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಗ್ರೌಂಡ್‌ಫ್ಲೋರ್‌ನಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಶೋರೂಂ ಇದ್ದು, ಬ್ಯಾಟರಿ ಸ್ಫೋಟಗೊಂಡಿದೆ. ಇದರಿಂದಾಗಿ ಇಡೀ ಕಟ್ಟಡಕ್ಕೆ ಬೆಂಕಿ ಹೊತ್ತಿದೆ. ಈ ವೇಳೆ 30ಕ್ಕೂ ಹೆಚ್ಚು ಮಂದಿ ಹೊಟೇಲ್‌ನಲ್ಲಿ ತಂಗಿದ್ದರು ಎನ್ನಲಾಗಿದೆ. ರಕ್ಷಣಾ ಸಿಬ್ಬಂದಿ ಹಲವರನ್ನು ರಕ್ಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!