Thursday, March 23, 2023

Latest Posts

ಬಳ್ಳಾರಿ ಎಕ್ಸ್‌ಪ್ರೆಸ್‌ನಲ್ಲಿ ಬಾಂಬ್ ಬಗ್ಗೆ ಸುಳ್ಳು ಬೆದರಿಕೆ ಕರೆ : ಓರ್ವನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಳ್ಳಾರಿ ಎಕ್ಸ್‌ಪ್ರೆಸ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಸುಳ್ಳು ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಸಿಕಂದರಾಬಾದ್ ರೈಲ್ವೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಪೋಲೀಸರು ಕೂಲಂಕುಶವಾಗಿ ಪರಿಶೀಲಿಸಿದ ನಂತರ ಇದು ನಕಲಿ ಕರೆ ಎಂದು ತಿಳಿದುಬಂದಿದೆ. ಇಂದು ಸುಳ್ಳು ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಕಂದರಾಬಾದ್ ಜಿಆರ್‌ಪಿ (ಸರ್ಕಾರಿ ರೈಲ್ವೆ ಪೊಲೀಸ್) ಎಸ್‌ಪಿ ಅನುರಾಧಾ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!