Saturday, March 25, 2023

Latest Posts

ಪ್ರಧಾನಮಂತ್ರಿ ಕಾರ್ಯಕ್ರಮದಲ್ಲಿ ಭದ್ರತೆ, ಶಿಷ್ಟಾಚಾರ ಲೋಪವಾಗದಂತೆ ಕಟ್ಟೆಚ್ಚರ

ಹೊಸದಿಗಂತ ವರದಿ ಬೆಳಗಾವಿ:

ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಭದ್ರತೆ ಹಾಗೂ ಶಿಷ್ಟಾಚಾರದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಿ ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.

ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗುರುವಾರ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆತಂದು ವಾಪಸ್ ಕರೆದುಕೊಂಡು ಹೋಗಲು ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಬೇಕು.

ಪ್ರಧಾನಮಂತ್ರಿಗಳು ಸಂಚರಿಸಲಿರುವ ಮಾರ್ಗಗಳಲ್ಲಿ ಅಗತ್ಯವಿರುವ ಕಡೆಗಳಲ್ಲಿ ದುರಸ್ತಿ ಅಥವಾ ನಿರ್ಮಾಣ ಕಾಮಗಾರಿ ನಡೆಸಬೇಕು ಎಂದರು.

ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಸಂಸದರಾದ ಮಂಗಲ ಅಂಗಡಿ, ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ರೈಲ್ವೆ, ಕೃಷಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!