ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಖಲಿಸ್ತಾನಿಗಳ ಗೂಂಡಾವರ್ತನೆ: ಭಾರತೀಯ ಕಾನ್ಸುಲೇಟ್‌ ಬಳಿ ಹೆಚ್ಚಿದ ಬಿಗಿ ಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

200 ಕ್ಕೂ ಹೆಚ್ಚು ಪ್ರತಿಭಟನಾಕಾರರು ಖಲಿಸ್ತಾನ್ ಧ್ವಜಗಳನ್ನು ಬೀಸುತ್ತಾ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್‌ ಮೇಲೆ ದಾಳಿ ನಡೆಸಿದ್ದರು. ಈ ಹಿನ್ನೆಲೆ ಕಚೇರಿ ಬಳಿ ಸ್ಯಾನ್ ಫ್ರಾನ್ಸಿಸ್ಕೋ ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆಯನ್ನು ನಿಯೋಜಿಸಿದೆ. ರಸ್ತೆಗೆ ಅಡ್ಡಲಾಗಿ ಭಾರೀ ಬ್ಯಾರಿಕೇಡ್‌ಗಳನ್ನು ಹಾಕಿ ಸಮವಸ್ತ್ರ ಧರಿಸಿದ ಎಸ್‌ಎಫ್‌ಪಿಡಿ ಅಧಿಕಾರಿಗಳು ಕಾವಲು ಕಾಯುತ್ತಿದ್ದಾರೆ. ಪ್ರದೇಶದಾದ್ಯಂತ ಗಸ್ತು ತಿರುಗುತ್ತಿದ್ದಾರೆ.

ಪ್ರತಿಭಟನಾಕಾರರು ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿ ಆಂಗ್ಲ ಮತ್ತು ಪಂಜಾಬಿ ಭಾಷೆಗಳಲ್ಲಿ ಭಾರತ ವಿರೋಧಿ ಭಾಷಣಗಳನ್ನು ಮಾಡಿದರು.

ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸವು ತನ್ನ ಆವರಣ ಮತ್ತು ಮಿಷನ್‌ನಲ್ಲಿ ಕೆಲಸ ಮಾಡುವ ರಾಜತಾಂತ್ರಿಕರನ್ನು ಸುರಕ್ಷಿತವಾಗಿರಿಸಲು ಜಾರಿ ಏಜೆನ್ಸಿಗಳೊಂದಿಗೆ ಕೆಲಸ ಮಾಡುತ್ತಿದೆ. ಏತನ್ಮಧ್ಯೆ, ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಅವರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸದಲ್ಲಿ ವಿಧ್ವಂಸಕ ಕೃತ್ಯವು “ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ” ಮತ್ತು ಇದನ್ನು ಯುಎಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಖಲಿಸ್ತಾನ್ ಬೆಂಬಲಿಗರು ಪ್ರಪಂಚದಾದ್ಯಂತ ಅವ್ಯವಸ್ಥೆಯನ್ನು ಸೃಷ್ಟಿಸಲು ಪ್ರಾರಂಭಿಸಿದ್ದಾರೆ. ಲಂಡನ್‌ನಲ್ಲಿ ವಿಧ್ವಂಸಕ ಕೃತ್ಯದ ನಂತರ, ಖಲಿಸ್ತಾನ್ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ (SFO) ಮೇಲೆ ದಾಳಿ ಮಾಡಿದ್ದಾರೆ. ಬೆಂಬಲಿಗರು ಬಾಗಿಲು ಮುರಿದು ಕಚೇರಿಗೆ ನುಗ್ಗಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!