July 14, 2026
Tuesday, July 14, 2026
spot_img

ಗೃಹ ಸಚಿವರ ಕ್ಷೇತ್ರದಲ್ಲೇ ಭದ್ರತಾ ವೈಫಲ್ಯ? ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿ

ಹೊಸದಿಗಂತ ವರದಿ ಕಲಬುರಗಿ:

ರಾಜ್ಯದ ಗೃಹ ಸಚಿವರ ಕ್ಷೇತ್ರವಾದ ಕಲಬುರಗಿಯಲ್ಲಿ ಭದ್ರತಾ ವ್ಯವಸ್ಥೆಯ ಕುರಿತು ಪ್ರಶ್ನೆಗಳು ಉದ್ಭವಿಸುವಂತಹ ಘಟನೆ ನಡೆದಿದೆ.ನಗರದ ಹೊರವಲಯದ ಸೀತನೂರ ಬಳಿಯ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮಾಹಿತಿಯ ಪ್ರಕಾರ, ಜೈಲಿನ ಕಾಂಪೌಂಡ್ ಗೋಡೆ ಹಾರಿ ಮೂವರು ಕೈದಿಗಳು ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ ಹಾಗೂ ಸಾಗರ್ ಎಂದು ಗುರುತಿಸಲಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಕೈದಿಗಳ ಪತ್ತೆಗೆ ತೀವ್ರ ಹುಡುಕಾಟ ಆರಂಭಿಸಿದ್ದಾರೆ.

ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ಜೈಲು ಭದ್ರತಾ ವ್ಯವಸ್ಥೆಯ ಮೇಲೆಯೇ ಪ್ರಶ್ನೆ ಮೂಡಿಸಿದೆ.
ಪರಾರಿಯಾದ ಕೈದಿಗಳ ಬಂಧನಕ್ಕಾಗಿ ಪೊಲೀಸರು ಮತ್ತು ಜೈಲು ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ವಿವಿಧ ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !