ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕ್ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಿಲಿಟರಿ ಮಾಹಿತಿ ರವಾನೆ ಮಾಡುತ್ತಿದ್ದ ಇಬ್ಬರನ್ನು ಪಂಜಾಬ್‌ನ ಅಮೃತಸರದಲ್ಲಿ ಭದ್ರತಾ ಪಡೆ ಹೆಡೆಮುರಿಕಟ್ಟಿದೆ.
ಪಹಲ್ಗಾಮ್ ದಾಳಿಯ ಬಳಿಕ ನಡೆದಿರುವ ಈ ಬೆಳವಣಿಗೆ ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ. ಶೇರ್ ಮಾಸಿಹ್ ಹಾಗೂ ಸೂರಜ್ ಮಾಸಿಹ್ ಬಂಧಿತ ಆರೋಪಿಗಳು.
ಈ ಇಬ್ಬರು ಅಮೃತಸರದಲ್ಲಿರುವ ಸೇನಾ ಅಂಟಾನ್ಮೆಂಟ್ ಪ್ರದೇಶ, ವಾಯುನೆಲೆಗಳ ಸೂಕ್ಷ್ಮ ಮಿಲಿಟರಿ ಮಾಹಿತಿ ಮತ್ತು ಫೋಟೋಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಕಳುಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಇವರನ್ನು ಅಮೃತಸರ ಕೇಂದ್ರ ಜೈಲಿಗೆ ಕಳುಹಿಸಲಾಗಿದ್ದು, ಹೆಚ್ಚಿನ ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪಂಜಾಬ್ ಡಿಜಿಪಿ ಗೌರವ್ ಯಾದವ್, ಆರೋಪಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಜೊತೆ ಇವರು ಸಂಪರ್ಕ ಹೊಂದಿದ್ದರು ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ. ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದಿದ್ದಾರೆ.