ಜಮ್ಮು ಕಾಶ್ಮೀರದಲ್ಲಿ ಭದ್ರತಾಪಡೆಗಳ ಕಾರ್ಯಾಚರಣೆ: ಇಬ್ಬರು ಭಯೋತ್ಪಾದಕರು ಎಸ್ಕೇಪ್, ಒಬ್ಬನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಪ್ರದೇಶದಲ್ಲಿ ಭದ್ರತಾಪಡೆಗಳು ವಿಶೇಷ ಕಾರ್ಯಾಚರಣೆ ನಡೆಸಿದ್ದು ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಯೋಧ ಗಾಯಗೊಂಡಿದ್ದಾರೆ.

ಭಯೋತ್ಪಾದಕರೊಂದಿಗೆ ಕೆಲಕಾಲ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ.ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಗಾಐಗೊಂಡಿದ್ದು ಆತ ಭದ್ರತಾ ಪಡೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಗಾಯಗೊಂಡಿರುವ ವ್ಯಕ್ತಿಯ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆತ ಕಾಶ್ಮೀರದ ನಾಗರಿಕನಾಗಿರುವ ಸಾಧ್ಯತೆ ಇದೆ ಎಂದು ಮೂಲಗಳು ವರದಿ ಮಾಡಿವೆ.

ಗಾಯಗೊಂಡ ಯೋಧನಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!