ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಜ್ಜರ್ನಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಎನ್ ಕೌಂಟರ್ ಆರಂಭವಾಗಿತ್ತು.
ಎನ್ ಕೌಂಟರ್ ನಡೆದ ಸ್ಥಳದಿಂದ ಹತ್ಯೆಗೀಡಾದ ಭಯೋತ್ಪಾದಕರ ಶವಗಳನ್ನು ಹೊರತೆಗೆಯಲಾಗಿದೆ. ಶೋಧ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.