ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಚೀನಾದ ಪ್ರಜೆಯನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಮಾಲ್ಡಾ ಜಿಲ್ಲೆಯ ಗಡಿ ಬಳಿ ಆತನನ್ನು ವಶಕ್ಕೆ ಪಡೆದಿದ್ದು, ಬಿಎಸ್ಎಫ್, ಸ್ಥಳೀಯ ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ.
ಇನ್ನು ಆತನಿಂದ ಲ್ಯಾಪ್ಟಾಪ್, ಚೀನಾದ ಪಾಸ್ಪೋರ್ಟ್ ಮತ್ತು ಇತರ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.