ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಶ್ವೇತಭವನದ ಬಳಿ ಯುಎಸ್ ಸಿಕ್ರೇಟ್ ಸರ್ವೀಸ್ ಏಜೆಂಟ್ ಅಧಿಕಾರಿಗಳು ಶಸ್ತ್ರಸಜ್ಜಿತ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ.
ಈ ಘಟನೆ ಸಂಭವಿಸಿದ್ದ ಸಮಯ ಶ್ವೇತಭವನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಲಿಲ್ಲ.
ಅಮೆರಿಕದ ಇಂಡಿಯಾನಾದಿಂದ ಶ್ವೇತಭವನದ ಕಡೆಗೆ ಪ್ರಯಾಣಿಸುತ್ತಿದ್ದ ಶಸ್ತ್ರಸಜ್ಜಿತ ವ್ಯಕ್ತಿಯನ್ನು ಯುಎಸ್ ಸಿಕ್ರೇಟ್ ಸರ್ವೀಸ್ ಏಜೆಂಟ್ ಅಧಿಕಾರಿಗಳು ಗುರುತಿಸಿದ್ದಾರೆ. ಆತನ ಬಳಿ ಮಾರಕ ಶಸ್ತ್ರಗಳು ಇವೆ ಎಂದು ನಂಬಲಾಗಿದೆ. ಈ ಸಂಬಂಧ ಯುಎಸ್ ಅಧಿಕಾರಿಗಳು ಗುಂಡು ಹಾರಿಸಿದ್ದು, ಆತ ಸಾವನ್ನಪ್ಪಿದ್ದಾನೆ.
ಗುಂಡು ಹಾರಿಸುವಾಗ ಯಾವುದೇ ಅಧಿಕಾರಿ, ಜನರಿಗೆ ಯಾವುದೇ ಹಾನಿಯಾಗಿಲ್ಲ. ಶಸ್ತ್ರಗಳನ್ನು ಹೊಂದಿದವ ಮಧ್ಯವಯಸ್ಕನಾಗಿದ್ದನು. ಅಲ್ಲಿನ ಪೊಲೀಸ್ ಅಧಿಕಾರಿಗಳು ವ್ಯಕ್ತಿಯ ಕುರಿತು ಇನ್ನಷ್ಟು ತನಿಖೆ ಆರಂಭಿಸಿದ್ದಾರೆ.
ಇನ್ನು ಈ ಘಟನೆ ನಡೆಯುವಾಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫ್ಲೋರಿಡಾದಲ್ಲಿ ಇದ್ದರು ಎಂದು ಯುಎಸ್ ಸಿಕ್ರೇಟ್ ಸರ್ವೀಸ್ ಏಜೆಂಟ್ ಅಧಿಕಾರಿಗಳು ಹೇಳಿದ್ದಾರೆ ಎನ್ನಲಾಗಿದೆ.