ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುದ್ಧ ಭೀತಿ ಹಿನ್ನೆಲೆಯಲ್ಲಿ ಭಾರತದ ರಾಜಧಾನಿ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿ ಸರ್ಕಾರವು ತಕ್ಷಣವೇ ನೌಕರರು, ಅಧಿಕಾರಿಗಳು, ಸಿಬ್ಬಂದಿಗಳಿಗೆ ನೀಡಲಾಗಿದ್ದ ಎಲ್ಲಾ ರಜೆಗಳನ್ನು ರದ್ದುಗೊಳಿಸಿದೆ.
ಮುಂಬರುವ ದಿನಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶಾಲೆಗಳನ್ನು ಮುಚ್ಚಲಾಗಿದೆ.
ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಗಡಿ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ದೆಹಲಿ ಸರ್ಕಾರ ಕೂಡಾ ಯಾವುದೇ ಅಧಿಕಾರಿಗೆ ಮುಂದಿನ ಆದೇಶದವರೆಗೆ ರಜೆ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.