ಮಾಜಿ ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ

ಹೊಸದಿಗಂತ ವರದಿ ಕಲಬುರಗಿ:

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ ಎದುರಾಗಿದೆ.

ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಬಿಎಸ್‌ವೈ ಕಲಬುರಗಿಗೆ ಆಗಮಿಸಿದ್ದರು. ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ನಿರ್ಮಿಸಲಾದ ಹೆಲಿಪ್ಯಾಡ್‌ನಲ್ಲಿ ಭದ್ರತಾ ಲೋಪ ಕಾಣಿಸಿದ್ದು, ಲ್ಯಾಂಡಿಂಗ್ ವೇಳೆ ಏಕಾಏಕಿ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ.

ತಕ್ಷಣ ಎಚ್ಚೆತ್ತ ಪೈಲಟ್ ಹೆಲಿಕಾಪ್ಟರ್‌ನ್ನು ಲ್ಯಾಂಡ್ ಮಾಡದೇ ಬೇರೆಡೆ ತೆಗೆದುಕೊಂಡು ಹೋಗಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿದೆ. ಹೆಲಿಪ್ಯಾಡ್ ಸುತ್ತಲಿನ ಜಮೀನಿನಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಹಾಕಲಾಗಿತ್ತು.

ಲ್ಯಾಂಡಿಂಗ್ ವೇಳೆ ಗಾಳಿಯ ರಭಸಕ್ಕೆ ಎಲ್ಲ ಪ್ಲಾಸ್ಟಿಕ್ ಕವರ್‌ಗಳು ವಿಮಾನಕ್ಕೆ ಎದುರಾಗಿವೆ. ನಂತರ ಒಂದೆರಡು ಸುತ್ತು ಆಕಾಶದಲ್ಲಿಯೇ ಹಾರಾಟನಡೆಸಿ ನಂತರ ಲ್ಯಾಂಡಿಂಗ್ ಮಾಡಲಾಗಿದೆ. ಅಷ್ಟರೊಳಗೆ ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಲಾಗಿದೆ.

ಹೆಲಿಕಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೋಲಿಸರು ಕಕ್ಕಾಬಿಕ್ಕಿಯಾಗಿ ಓಡಾಡಿದರು.ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೆ ಇರುವುದರಿಂದ ಇವೊಂದು ಭದ್ರತಾ ಲೋಪ ಎದುರಾಗಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!