ಪ್ರಧಾನಿ ಮೋದಿಗೆ ಭದ್ರತಾ ಲೋಪ: ಚೊಂಬು ತೋರಿಸಿಲು ಬಂದ ನಲಪಾಡ್‌ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮರಳಿ ಹೋಗುತ್ತಿರುವಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಯುವ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ಮೇಖ್ರಿ ವೃತ್ತದ ಬಳಿ ನಿಂತುಕೊಂಡು ಚೊಂಬು ತೋರಿಸಲು ಮುಂದಾಗಿದ್ದು, ಈ ವೇಳೆ ಪೊಲೀಸರು ನಲಪಾಡ್ ಅವರನ್ನು ಬಲವಂತವಾಗಿ ಬಂಧಿಸಿ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ.

ದೇಶದ ಪ್ರಧಾನಮಂತ್ರಿ ಬಂದಾಗ ಅವರಿಗೆ ಯಾವುದೇ ಚ್ಯುತಿ ಬಾರದಂತೆ ನೋಡಿಕೊಳ್ಳುವುದು ಸರ್ಕಾರದ ಕೆಲಸ ಆಗಿರುತ್ತದೆ. ಆದರೆ, ಪ್ರಧಾನಿ ಮೋದಿ ಅವರ ವಿರುದ್ಧ ಕಾಂಗ್ರೆಸ್‌ ಮುಖಂಡರು ಮೇಖ್ರಿ ವೃತ್ತದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಇದನ್ನು ತಡೆದಿದ್ದ ಪೊಲೀಸರ ನಡುವೆ ಬಂದಿದ್ದ ಕೆಪಿಸಿಸಿ ಯುವ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಪ್ರಧಾನಿ ಮೋದಿ ವಾಪಸ್ ಹೋಗುವಾಗ ಚೊಂಬು ತೋರಿಸುವ ಯತ್ನ ಮಾಡಿದ್ದಾರೆ. ಆದರೆ, ಇದನ್ನು ವಿಫಲಗೊಳಿಸಿದ ಪೊಲೀಸರು ನಲಪಾಡ್‌ನಲ್ಲಿ ಬಲವಂತವಾಗಿ ಎಳೆದೊಯ್ದು, ಕಾರಿನಲ್ಲಿ ಕೂರಿಸಿ ಸ್ಟೇಷನ್‌ನತ್ತ ಕರೆದೊಯ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!