ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಬುಧವಾರ ಉಂಟಾದ ಭದ್ರತಾ ಉಲ್ಲಂಘನೆ ಘಟನೆಗೆ ಸಂಬಂಧಿಸಿದಂತೆ ಲೋಕಸಭಾ ಸಚಿವಾಲಯವು ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ನಲ್ಲಿ ಹಿರಿಯ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.ಅನುರಾಗ್ ಠಾಕೂರ್, ಪಿಯೂಷ್ ಗೋಯಲ್, ಪ್ರಹ್ಲಾದ್, ಜೋಶಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ಉಪಸ್ಥಿತರಿದ್ದರು.
ಇದಲ್ಲದೇ ಭದ್ರತಾ ಉಲ್ಲಂಘನೆ ಘಟನೆಯ ಬಗ್ಗೆ ಚರ್ಚಿಸಲು ವಿರೋಧ ಪಕ್ಷದ ನಾಯಕರು ಸಂಸತ್ತಿನಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಸಭೆ ನಡೆಸಿದರು.