ಲೋಕಸಭೆಯಲ್ಲಿ ಭದ್ರತಾ ಲೋಪ: ನಾಲ್ವರು ಪೊಲೀಸ್ ವಶಕ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಕೂಡಲೇ ಆ ಆತನನ್ನು ವಶಕ್ಕೆ ಪಡೆಯಲಾಗಿದೆ

ಸಂಸತ್ತಿನ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದು, ಒಟ್ಟಿಗೆ ಇಬ್ಬರು ಸೇರಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಲೋಕಸಭೆ ಗ್ಯಾಲರಿಯಿಂದ ಜಿಗಿದು ಕಲರ್ ಬಾಂಬ್ ಸಿಡಿಸಿದರೆ, ಇಬ್ಬರು ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಒಟ್ಟು ನಾಲ್ವರನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!